ಕರಾವಳಿ

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವಾಗಲೇ ಕುಸಿದುಬಿದ್ದು ವಿದ್ಯಾರ್ಥಿನಿ ಮೃತ್ಯು

Pinterest LinkedIn Tumblr

ಮೈಸೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ ಮೈಸೂರಿನ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

(ಸಾಂದರ್ಭಿಕ ಚಿತ್ರ)

ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದಾಳೆ, ಕೂಡಲೇ ಆಕೆಯನ್ನು ಶಿಕ್ಷಕರು ಮತ್ತು ಪರೀಕ್ಷಾ ಸಿಬ್ಬಂದಿ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಪರೀಕ್ಷಿಸಿದ್ದ ವೈದ್ಯರು ಆಕೆ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಹೃದಯಾಘಾತದಿಂದ ಆಕೆ ಮೃತಪಟ್ಟಿರಬಹುದು ಎನ್ನಲಾಗಿದೆ, ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ಬಗ್ಗೆ ಟಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವಿದ್ಯಾರ್ಥಿನಿ ವೈದ್ಯಕೀಯ ಪರೀಕ್ಷಾ ವರದಿ ಇನ್ನೂ ಬರುವ ಬಾರದ ಕಾರಣ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

Comments are closed.