ಕರ್ನಾಟಕ

ಬಿಜೆಪಿಗೂ ಬ್ರಿಟಿಷರಿಗೂ ಯಾವುದೇ ವ್ಯತ್ಯಾಸವಿಲ್ಲ: ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ವಾರ್..!

Pinterest LinkedIn Tumblr

ಬೆಂಗಳೂರು: ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದ್ದು, ಬ್ರಿಟೀಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಹೇಳಿಕೆ ವಿರೋಧಿಸಿ ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ 75 ವರ್ಷಗಳಿಂದ ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಅಮಿತ್ ಶಾ ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ ಎಂದಿದ್ದಾರೆ.

ಇನ್ನು ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ.

ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.

Comments are closed.