ಮಂಗಳೂರು: ನಗರ ಹೊರ ವಲಯದ ಗಂಜಿಮಠದ ಸಮೀಪದ ಸೂರಲ್ಪಡಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ ನಾಲ್ಕು ಪ್ರಯಾಣಿಕರು ಗಾಯಗೊಂಡ ಘಟನೆ ಏಪ್ರಿಲ್ 13ರ ಬುಧವಾರ ರಾತ್ರಿ ನಡೆದಿದೆ.

ಬಸ್ಸಿನ ಸ್ಟೇರಿಂಗ್ ರಾಡ್ ತುಂಡಾದ ಹಿನ್ನೆಲೆ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ ಮೂಡುಬಿದಿರೆಯಿಂದ ಮಂಗಳೂರಿಗೆ ಬರುತ್ತಿತ್ತು ಎಂದು ತಿಳಿದುಬಂದಿದೆ.
Comments are closed.