ಕರಾವಳಿ

ನಮ್ಮ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಯಾವ ಅಪರಾಧ ನಡೆದಿದೆ?: ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟ್ವೀಟ್

Pinterest LinkedIn Tumblr

ಬೆಂಗಳೂರು: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳತ್ತ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ. ಮೊದಲ ದಿನವಾದ ನಿನ್ನೆ 11,311 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಹಿಜಾಬ್​ಗೆ ಅವಕಾಶ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಆರು ಮಂದಿಯ ಪೈಕಿ ಇಬ್ಬರು ನಿನ್ನೆ ಪರೀಕ್ಷೆ ಬರೆಯಬೇಕಿತ್ತು. ಅವರು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಹಾಲ್ ಟಿಕೆಟ್ ಸ್ವೀಕರಿಸಿದರೂ, ಪರೀಕ್ಷೆ ಬರೆಯದೆ ಮನೆಗಳಿಗೆ ಹಿಂದಿರುಗಿದರು.

ಪರೀಕ್ಷೆಗೆ ಗೈರಾಗಿದ್ದ ಆಲಿಯಾ ಅಸಾದಿ ಈ ಕುರಿತು ಟ್ವೀಟ್ ಮಾಡಿದ್ದು ತಮ್ಮ ಆಕ್ರೋಶ ಮತ್ತು ಅಸಮಾಧಾನ ಹೊರಹಾಕಿದ್ದಾರೆ.

‘ನನಗೆ ಮತ್ತು ರೇಷಂಗೆ ಪರೀಕ್ಷೆ ಬರೆಯಲು ಸಿಬ್ಬಂದಿ ಅವಕಾಶ ನಿರಾಕರಿಸಿದ್ದಾರೆ. ಇದರಿಂದ ನಾವು ಮತ್ತೆ ಮತ್ತೆ ನಿರಾಸೆಗೆ ಒಳಗಾಗುತ್ತಿದ್ದೇವೆ. ಬಿಜೆಪಿ ಶಾಸಕ ರಘುಪತಿ ಭಟ್ ನಮಗೆ ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್, ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಹೆದರಿಸುತ್ತಿದ್ದಾರೆ. ನಮ್ಮ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ. ನಮ್ಮ ದೇಶ ಎತ್ತ ಸಾಗುತ್ತಿದೆ’ ಎಂದು ಆಲಿಯಾ ಅಸಾದಿ ಟ್ವೀಟ್​ನಲ್ಲಿ ಪ್ರಶ್ನಿಸಿದ್ದಾರೆ.

Comments are closed.