ಬೆಂಗಳೂರು: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಗೆ ಶನಿವಾರ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಸಿ.ಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಅವರ ನೇತೃತ್ವದಲ್ಲಿ ಹಾಗೂ ಭಾ.ಜ.ಪ ಮುಖಂಡರ ಉಪಸ್ಥಿತಿಯಲ್ಲಿ ಬಿಜೆಪಿಯ ಧ್ವಜ ಪಡೆಯುವ ಮೂಲಕ ‘ಕಮಲ’ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಶನಿವಾರದಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಒಂದು ಗಂಟೆಯೊಳಗೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಕಳೆದ ಒಂದೆರಡು ವರ್ಷಗಳಿಂದ ಪ್ರಮೋದ್ ಬಿಜೆಪಿಗೆ ಬರುವುದು ಖಚಿತ ಎಂಬ ಮಾತುಗಳು ಕೇಳಿಬಂದಿತ್ತಾದರೂ ಕೂಡ ಇಂದು ಅವರು ಭಾಜಪ ಪಕ್ಷಕ್ಕೆ ಅಧೀಕೃತವಾಗಿ ಸೇರ್ಪಡೆಗೊಳ್ಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತಾರ್ಕಿಕ ಉತ್ತರ ಸಿಕ್ಕಿದೆ.
Comments are closed.