ಕರಾವಳಿ

ಕಡಲ ಅಬ್ಬರಕ್ಕೆ ಮಲ್ಪೆಯಲ್ಲಿ ನಿರ್ಮಿಸಿದ ‘ತೇಲುವ ಸೇತುವೆ’ಗೆ ಹಾನಿ..!

Pinterest LinkedIn Tumblr

ಉಡುಪಿ: ಇಲ್ಲಿನ ಮಲ್ಪೆಯ ಬೀಚ್ ನಲ್ಲಿ ನಿರ್ಮಿಸಲಾಗಿದ್ದ ತೇಲುವ ಸೇತುವೆ ಉದ್ಘಾಟನೆಗೊಂಡು ನಾಲ್ಕೈದು ದಿನದೊಳಗೆ ಕಡಲಿನ ಅಬ್ಬರಕ್ಕೆ ಹಾನಿಗೊಂಡಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸೇತುವೆಯ ಲಾಕ್ ತೆಗೆಯುವ ವೇಳೆ ಸೇತುವೆಯ ಭಾಗಗಳು ಕಳಚಿಕೊಂಡಿವೆ ಎಂದು ತಿಳಿದು ಬಂದಿದ್ದು ಈ ವಿಡಿಯೋ ವೈರಲ್ ಆಗಿದೆ.

ಈಚೆಗಷ್ಟೇ ಉದ್ಘಾಟನೆಗೊಂಡಿರುವ ನೂತನ ಅಲೆಗಳಲ್ಲಿ ತೇಲುವ ಸೇತುವೆಯನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದರೂ ಅವಕಾಶ ನೀಡಿರಲಿಲ್ಲ. ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಪ್ರವಾಸಿಗರು ನೀರಿಗೆ ಇಳಿಯದಂತೆ ಸ್ವಯಂಸೇವಕರು ಕಟ್ಟೆಚ್ಚರ ವಹಿಸಿದ್ದರು.

ಸಮುದ್ರದ ಅಲೆಗಳ ಒತ್ತಡ ಬೆಳಗ್ಗಿನಿಂದಲೇ ಹೆಚ್ಚು ಕಂಡುಬಂದಿದ್ದು, ಭಾನುವಾರ ಮಧ್ಯಾಹ್ನದ ಬಳಿಕ ಗಾಳಿಯ ವೇಗಕ್ಕೆ ಅಲೆಗಳು ತೀವ್ರಗೊಂಡಿದ್ದರಿಂದ ಮಲ್ಪೆ ಬೀಚ್‌ನಲ್ಲಿ 4 ಗಂಟೆ ಬಳಿಕ ಯಾವುದೇ ವಾಟರ್‌ ಸ್ಪೋರ್ಟ್ಸ್ ನಡೆಸಲು ಆವಕಾಶ ನೀಡಲಿಲ್ಲ.

ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹಕಾರದಲ್ಲಿ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ನಿರ್ಮಾಣವಾಗಿತ್ತು.

 

Comments are closed.