ಕರಾವಳಿ

ವಿಟ್ಲದ ದಲಿತ ಯುವತಿ ಅನುಮಾನಾಸ್ಪದ ಸಾವು: ಸೂಕ್ತ ತನಿಖೆಗೆ ಆಗ್ರಹಿಸಿ ಕುಂದಾಪುರದಲ್ಲಿ ಭಜರಂಗದಳ, ವಿಹಿಂಪ ಪ್ರತಿಭಟನೆ

Pinterest LinkedIn Tumblr

ಕುಂದಾಪುರ: ವಿಟ್ಲದಲ್ಲಿ ದಲಿತ ಯುವತಿ ಅನುಮಾನಸ್ಪದ ಸಾವನ್ನು ಖಂಡಿಸಿ, ಸೂಕ್ತ ತನಿಖೆಗೆ ಆಗ್ರಹಿಸಿ ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ವಿಶ್ವಹಿಂದು ಪರಿಷತ್ ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಸುಬ್ರಮಣ್ಯ ಹೊಳ್ಳ ಮಾತನಾಡಿದರು.

ಬಜರಂಗದಳದ ಜಿಲ್ಲಾ ಸಂಯೋಜಕ ಸುರೇಂದ್ರ ಕೋಟೇಶ್ವರ ಮಾತನಾಡಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಲವ್ ಜಿಹಾದಿನ ವಿರುದ್ಧ ಸರಕಾರ ಮೂರು ತಿಂಗಳ ಒಳಗಾಗಿ ಕಾನೂನು ತರಬೇಕು ಅದೇ ರೀತಿಯಲ್ಲಿ ಕುಟುಂಬಕ್ಕೆ ಸರ್ಕಾರ ಪರಿಹಾರ ಧನವನ್ನು ಕೂಡಲೇ ಘೋಷಣೆ ಮಾಡಬೇಕು ಎಂದು ಈ ಪ್ರತಿಭಟನೆಯಲ್ಲಿ ಆಗ್ರಹ ಮಾಡಿದ್ದಾರೆ.

ಈ ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಸಂಪರ್ಕ ಪ್ರಮುಖ್ ಗಿರೀಶ್ ಕುಂದಾಪುರ, ವಿಶ್ವ ಹಿಂದೂ ಪರಿಷತ್ ಕುಂದಾಪುರ ತಾಲೂಕು ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಗೋಳಿಯಂಗಡಿ, ತಾಲೂಕು ಕಾರ್ಯದರ್ಶಿ ಪ್ರದೀಪ್ ಮಾರ್ಕೋಡು, ಬಜರಂಗದಳದ ತಾಲೂಕು ಸಂಯೋಜಕ ಸುಧೀರ್ ಮೆರ್ಡಿ, ಬಜರಂಗದಳದ ತಾಲೂಕು ಪ್ರಮುಖರಾದ ವಸಂತ್ ಸಂಗಮ್, ಗುರುರಾಜ್ ಸಂಗಮ್, ಶ್ರೀನಾಥ್ ತೆಕ್ಕಟ್ಟೆ, ಸಂಘಪರಿವಾರದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

Comments are closed.