ಬೆಂಗಳೂರು: ಧಾರ್ಮಿಕ ಕೇಂದ್ರಗಳು ಸೇರಿದಂತೆ ಯಾವುದೇ ಸಮಾರಂಭಗಳಲ್ಲಿ ಧ್ವನಿವರ್ಧಕ ಬಳಕೆಗೆ ಬೆಳಿಗ್ಗೆ 6ಗಂಟೆಯಿಂದ ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಅವಕಾಶ ಕೊಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಧ್ವನಿ ವರ್ಧಕ ಬಳಕೆಗೆ ಅನುಮತಿ ನೀಡಲಾಗಿದೆ. ಆದರೆ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆ ವರೆಗೆ ಅವಕಾಶ ಇರುವುದಿಲ್ಲ. ಸರ್ಕಾರದ ನಿಯಮಗಳನ್ನು ಎಲ್ಲರು ಕಡ್ಡಾಯವಾಗಿ ಪಾಲಿಸಬೇಕು.
ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯವದವರು ಕೂಡಲೇ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ.