ಕರಾವಳಿ

ಬೈಕ್ ಸ್ಕಿಡ್: ಕಾಲ್ತೋಡು ಗ್ರಾಮಪಂಚಾಯತ್ ಅಧ್ಯಕ್ಷೆ ಸಾವು

Pinterest LinkedIn Tumblr

ಕುಂದಾಪುರ: ಬೈಕಿನಲ್ಲಿ ಹಿಂಬದಿ ಸವಾರೆಯಾಗಿ ಹೋಗುವಾಗ ಬೈಕ್ ಸ್ಕಿಡ್ ಆದ ಪರಿಣಾಮ ರಸ್ತೆಗೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ಮೇ.17 ಮಂಗಳವಾರ ನಡೆದಿದೆ.

ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ (55) ಮೃತ ದುರ್ದೈವಿ.

ಅವರು ಮಂಗಳವಾರ ಗ್ರಾಮ ಪಂಚಾಯತ್ ಗೆ ಬಂದು ಮೀಟಿಂಗ್ ಮುಗಿಸಿಕೊಂಡು ಮುರೂರು ಎಂಬಲ್ಲಿರುವ ತಮ್ಮ ಮನೆಗೆ ಬೈಕ್ ನಲ್ಲಿ ಹಿಂಬದಿ ಕುಳಿತು ಕೊಂಡು ಹೋಗುವಾಗ ಆಕಸ್ಮಿಕವಾಗಿ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಪೆಟ್ಟಾಗಿದ್ದು ಅವರನ್ನು ಕುಂದಾಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕಾಲ್ತೋಡು ಗ್ರಾಮ ಪಂಚಾಯತ್ ಗೆ ಸದಸ್ಯರಾಗಿ 2ನೇ ಭಾರೀ ಆಯ್ಕೆ ಆಗಿದ್ದು ಅವರು ಪ್ರಸ್ತುತ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು 10 ವರ್ಷಗಳ ಕಾಲ ಕಾಲ್ತೋಡು ಭಾಗದಲ್ಲಿ ಆಶಾ ಕಾರ್ಯಕರ್ತೆ ಆಗಿಯೂ ಸೇವೆ ಸಲ್ಲಿಸಿದ್ದರು.

Comments are closed.