ಕರಾವಳಿ

ನಿರಂತರ ಮಳೆ: ದಕ್ಷಿಣಕನ್ನಡ, ಮೈಸೂರು, ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ..!

Pinterest LinkedIn Tumblr

ಬೆಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆ ಶಾಲಾ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮೈಸೂರು, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ನಿರಂತರವಾಗಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಸೇರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಎಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗಳಿಗೂ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ತುಮಕೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಘೋಷಿಸಿದೆ ಎಂದು ತಿಳಿದುಬಂದಿದೆ.

Comments are closed.