ಕರ್ನಾಟಕ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವಿರುವ ಪಾಠ ಕೈಬಿಡೋದಿಲ್ಲ: ಸಚಿವ ಕೋಟ ಸ್ಪಷ್ಟನೆ

Pinterest LinkedIn Tumblr

ಬೆಂಗಳೂರು: ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಬಂದ ನಂತರ ಸ್ಪಷ್ಟನೆ ನೀಡಿದ ಸಚಿವ ಕೋಟ, ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರನ್ನು ಈ ಕುರಿತು ಬೇಟಿಯಾಗಿ ನಾನು ಮಾತನಾಡಿದ್ದು, ಪಠ್ಯಪುಸ್ತಕದಲ್ಲಿ ನಾರಾಯಣಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆ ಇಲ್ಲ ಎಂದಿದ್ದಾರೆ.

ರಾಜ್ಯದಾದ್ಯಂತ ಇರುವ ಈಡಿಗ, ಬಿಲ್ಲವ ಸಮುದಾಯ ಸೇರಿದಂತೆ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ವಿನಂತಿಸಿದ ಸಚಿವ ಕೋಟ, ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದರು.

Comments are closed.