ಕರಾವಳಿ

ಉಡುಪಿ ಹೆಗ್ಗುಂಜೆಯಲ್ಲಿ ಕಾರಿನೊಳಗೆ ಪೆಟ್ರೋಲ್‌‌‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಯುವ ಜೋಡಿ

Pinterest LinkedIn Tumblr

ಉಡುಪಿ: ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂದಾರ್ತಿ ಸಮೀಪದ ಹೆಗ್ಗುಂಜೆ ಎಂಬಲ್ಲಿ ಸಂಭವಿಸಿದೆ.

ಯಶವಂತ್ ಮತ್ತು ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿರುವ ಯುವ ಜೋಡಿ. ಇವರು ಬೆಂಗಳೂರಿನ ಆರ್.ಟಿ.ನಗರದವರು ಎಂದು ತಿಳಿದುಬಂದಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಸುಡುತ್ತಿದ್ದ ಕಾರು ಪತ್ತೆಯಾಗಿದೆ.

ಸ್ಥಳೀಯರು ಬೆಂಕಿ ನಂದಿಸಿದಾಗ ಕಾರಿನೊಳಗೆ ಯುವಕ, ಯುವತಿ ಶವ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಮೃತರು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.

ಮೃತರು ನಿನ್ನೆ (ಮೇ 21) ಮಂಗಳೂರಿಗೆ ಬಂದು ಹುಸೇನ್ ಎಂಬವರಿಂದ ಸ್ವಿಫ್ಟ್ ಕಾರು ಬಾಡಿಗೆ ಪಡೆದಿದ್ದರು. ​ಕಾರು ಬಾಡಿಗೆ ಪಡೆದು ಉಡುಪಿಗೆ ಬಂದಿದ್ದರು. ಕಳೆದ 3 ದಿನಗಳ ಹಿಂದೆ ಯಶವಂತ್ ಮತ್ತು ಜ್ಯೋತಿ ನಾಪತ್ತೆಯಾಗಿರುವ ಬಗ್ಗೆ ಬೆಂಗಳೂರಿನ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಂಕಿಯ ತೀವೃತೆಗೆ ಸ್ವಿಫ್ಟ್ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

Comments are closed.