ಕರಾವಳಿ

ಉಜಿರೆ ಎಸ್.ಡಿ.ಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

Pinterest LinkedIn Tumblr

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ( 66 ವ) ಅವರು ಮೇ.22ರ ರಾತ್ರಿ ಸಿಂಗಾಪುರದಲ್ಲಿ ನಿಧನರಾದರು.

ಅನಾರೋಗ್ಯದ ಕಾರಣದಿಂದ ‌ಸಿಂಗಪುರ ದೇಶದಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ಧ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ‌ ಹಲವು ವರ್ಷ ಅವರು ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವಾರು ಸಮ್ಮೇಳನಗಳನ್ನು ನಡೆಸಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಬಂಧು‌ ವರ್ಗ, ಕುಟುಂಬಸ್ಥರನ್ನು ಆಗಲಿದ್ದಾರೆ. ಮೃತ ಡಾ. ಯಶೋವರ್ಮ ಅವರು ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆಯವರ ಸಹೋದರ.

Comments are closed.