ಕರಾವಳಿ

ಅಕ್ರಮ ದನ ಸಾಗಾಟ- ಶಿರೂರು ಟೋಲ್ ಬಳಿ ಮೂವರು ಭಟ್ಕಳ ಪೊಲೀಸರ ವಶಕ್ಕೆ

Pinterest LinkedIn Tumblr

ಉಡುಪಿ: ಬೈಂದೂರು ತಾಲೂಕಿನ ಶಿರೂರು ಟೋಲ್‌ಗೇಟ್ ಬಳಿ ಅಕಮ್ರವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ವಾಹನದಲ್ಲಿ 9 ದನಗಳನ್ನು ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಭಟ್ಕಳ ಗ್ರಾಮೀಣ ಠಾಣಾಧಿಕಾರಿ ಭರತ್‌ಕುಮಾರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಟೋಲ್ ಬಳಿ ಆರೋಪಿಗಳನ್ನು ವಶಪಡಿಸಿಕೊಂಡರು.

ಓರ್ವ ಆರೋಪಿ ಪರಾರಿಯಾಗಿದ್ದಾನೆ. ಭಟ್ಕಳ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Comments are closed.