ಪ್ರಮುಖ ವರದಿಗಳು

ನ್ಯಾಷನಲ್ ಹೆರಾಲ್ಡ್ ಕೇಸ್: ವಿಚಾರಣೆ ಅಪೂರ್ಣ, ಇಂದೂ ಕೂಡ ಇಡಿಯಿಂದ ರಾಹುಲ್ ಗಾಂಧಿ ವಿಚಾರಣೆ; ಬಿಗಿ ಭದ್ರತೆ

Pinterest LinkedIn Tumblr

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಒಂದೆಡೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಮತ್ತೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೈಡ್ರಾಮಾ ಶುರುವಾಗಿತ್ತು.

ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ಸಿಗರು ದೇಶದ ಹಲವಡೆ ಪ್ರತಿಭಟನೆ ನಡೆಸಿದ್ದರು.

ಇಡಿ ನೋಟಿಸ್ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 11.10ರ ಸುಮಾರಿಗೆ ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿಯವರು ವಿಚಾರಣೆಗೆ ಹಾಜರಾದರು. ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿಯವರು ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು (ಮಂಗಳವಾರ) ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಇಡಿ ವಿಚಾರಣೆಯ ಮೊದಲ ದಿನವೇ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇಂದು ಯಾವುದೇ ರೀತಿಯ ಅಹಿತಕರ ವಾತಾವರಣ ಸೃಷ್ಟಿಯಾಗದಂತೆ ದೆಹಲಿ ಪೊಲೀಸರು ಎಲ್ಲೆಡೆ ಬಿಗಿ ಭದ್ರತೆ ನೀಡಿದ್ದಾರೆ.

ದೆಹಲಿಯ ಅಕ್ಬಾರ್ ರಸ್ತೆಯಲ್ಲಿ ಬ್ಯಾರಿಕೇಡ್ ಗಳ ಹಾಕಿ, ಹೆಚ್ಚಿನ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ. ಈ ಸ್ಥಳದಲ್ಲಿ ಸೆಕ್ಷನ್ 144 ಮುಂದುವರೆದಿದೆ ಎಂದು ತಿಳಿದುಬಂದಿದೆ.

 

Comments are closed.