ಕರಾವಳಿ

ಕಪಾಟಿನ ಮೇಲಿದ್ದ ಬಟ್ಟೆ ತೆಗೆಯಲು ಹೋದಾಗ ನಾಗರಹಾವು ಕಡಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

Pinterest LinkedIn Tumblr

ಉಡುಪಿ: ನಾಗರಹಾವು ಕಚ್ಚಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಿದಿಯೂರು ಗ್ರಾಮದ ಸುಧಾಕರ ಅಮೀನ್‌ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

(ಸಾಂದರ್ಭಿಕ ಚಿತ್ರ)

ಸುಧಾಕರ ಅಮೀನ್‌ (55) ಅವರಿಗೆ ಜೂ. 8ರಂದು ತಮ್ಮ ಮನೆಯ ಕೋಣೆಯಲ್ಲಿ ಕಪಾಟಿನ ಮೇಲೆ ಇಟ್ಟಿದ್ದ ಅಂಗಿಯನ್ನು ತೆಗೆಯಲು ಹೋದಾಗ ಕಪಾಟಿನ ಮೇಲಿದ್ದ ನಾಗರಹಾವು ಕಚ್ಚಿತ್ತು. ಕೂಡಲೇ ಸುಧಾಕರ ಅಮೀನ್‌ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಮೃತರ ಅಕ್ಕ ವನಜ ಅಮೀನ್‌ ಅವರು ನೀಡಿದ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.