ಕರಾವಳಿ

ಬಿಜೆಪಿ ಸರಕಾರದ ಆಡಳಿತ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ

Pinterest LinkedIn Tumblr

ಉಡುಪಿ: ಬಿಜೆಪಿ ಸರಕಾರದ ಆಡಳಿತ ನೀತಿ ವಿರೋಧಿಸಿ ಹಾಗೂ ದೇಶದಲ್ಲಿ ಇದರಿಂದಾಗಿ ನಡೆಯುತ್ತಿರುವ ಸಮಸ್ಯೆಗಳನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜೂ.17‌ ಶುಕ್ರವಾರ ಉಡುಪಿ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಡಿಸಿ ಕಚೇರಿ ಆವರಣ ಪ್ರವೇಶಿಸಲು ಯತ್ನಿಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಡಿಸಿ ಕಚೇರಿ ಆವರಣಕ್ಕೆ ಪ್ರವೇಶಿಸಲು ಪೊಲೀಸ್ ಸಿಬ್ಬಂದಿ ತಡೆದರು. ಈ ವೇಳೆ‌ಪ್ರತಿಭಟನಾ ನಿರತರು ಗೇಟ್ ಬಳಿ ಕುಳಿತು ಪ್ರತಿಭಟನೆ ನಡೆಸಿದರು. ಭ್ರಷ್ಟಾಚಾರ, ಇಡಿ ದಾಳಿಯಂತಹ ಇತ್ತೀಚಿನ ಬೆಳವಣಿಗೆಗಳ ಕುರಿತು ಬಿಜೆಪಿ ಆಡಳಿತದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಣಿಪಾಲ ಕಾಯಿನ್ ಸರ್ಕಲ್ ನಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್‍ಯಾಲಿ ನಡೆಯಿತು.

ರಾಜ್ಯ ಉಸ್ತುವಾರಿ ಅಭಯಚಂದ್ರ ಜೈನ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಹುಸೇನ್ ಪಡುಬಿದ್ರಿ ಮಂಜುನಾಥ್, ಎಂ.ಎ.ಗಫೂರ್, ವಿಘ್ನೇಶ್ ಕಿಣಿ, ಹರೀಶ್ ಕಿಣಿ, ಕೃಷ್ಣಮೂರ್ತಿ ಆಚಾರ್ಯ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ರೋಶಿನಿ ಒಲಿವೇರ, ಪ್ರಖ್ಯಾತ್ ಶೆಟ್ಟಿ ಹಾಗೂ ಎಲ್ಲಾ ಬ್ಲಾಕ್‌ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

Comments are closed.