ಕರ್ನಾಟಕ

ಜನತಾ ಪರಿವಾರದ ಹಿರಿಯ ನಾಯಕ, ಮಾಜಿ ಸಚಿವ ಎಂ.ರಘುಪತಿ ನಿಧನ

Pinterest LinkedIn Tumblr

ಬೆಂಗಳೂರು: ಮಾಜಿ ಸಚಿವ ಎಂ.ರಘುಪತಿ (81) ಅವರು ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಎಂ.ರಘುಪತಿ ಅವರು ಮಲ್ಲೇಶ್ವರಂ ಮತ್ತು ಶಿವಾಜಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದು ಶಾಸಕರಾಗಿದ್ದರು. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಅವರ ಸಂಪುಟದಲ್ಲಿ ಎಂ.ರಘುಪತಿ ಅವರು ಶಿಕ್ಷಣ ಸಚಿವರಾಗಿದ್ದರು.

ಜನತಾ ಪರಿವಾರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ರಘುಪತಿ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಎನ್.ಟಿ ರಾಮ ರಾವ್ ಅವರಿಗೆ ಆತ್ಮೀಯರಾಗಿದ್ದವರು. ಇತ್ತೀಚಿನ ದಿನಗಳಲ್ಲಿ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.

ಎಂ.ರಘುಪತಿ ಅವರ ಪಾರ್ಥೀವ ಶರೀರವನ್ನು ಅವರ ಮಲ್ಲೇಶ್ವರಂ ನಿವಾಸದಲ್ಲಿ ಇರಿಸಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ (ಜೂ.19) ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ತಿಳಿದುಬಂದಿದೆ.

ಇವರು ಮಲ್ಲೇಶ್ವರಂ ಶಾಸಕರಾಗಿ ಸೇವೆ ಸಲ್ಲಿಸಿದ್ದು, ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Comments are closed.