ಕರಾವಳಿ

ಜೀವ ಬೆದರಿಕೆಯೊಡ್ಡಿದ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಉಡುಪಿ ಜೆ.ಎಂ.ಎಫ್.ಸಿ ಕೋರ್ಟ್

Pinterest LinkedIn Tumblr

ಉಡುಪಿ: ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿದ ಆರೋಪಿಗಳಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2015 ಜೂನ್ 24 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ವಾರಂಬಳ್ಳಿಯ ಶಂಕರ್ ಪೂಜಾರಿ ಬಿ.ಎಸ್, ಕುಕ್ಕೆಹಳ್ಳಿಯ ಸುನೀಲ್ ಶೆಟ್ಟಿ, ಹೇರೂರು ಗ್ರಾಮದ ರಿತೇಶ್ ಕುಂದರ್, ಪೆರ್ಡೂರಿನ ಸುರೇಶ್ ಶೆಟ್ಟಿ ಹಾಗೂ ಹಾವಂಜೆಯ ಅಜಿತ್ ಶೆಟ್ಟಿ ಇವರುಗಳು ಉಡುಪಿ ತಾಲೂಕು ಹೇರೂರು ಗ್ರಾಮದ ನಿವಾಸಿ ರಾಮದಾಸ್ ಹೆಗ್ಡೆ ಎಂಬ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿರುವ ಹಿನ್ನೆಲೆ, ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು 5 ಜನ ಆರೋಪಿಗಳಿಗೆ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಹಾಗೂ 10000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.

ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿದ್ದಾರೆ.

Comments are closed.