ಕರಾವಳಿ

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 634 ಕಾಲು ಸಂಕಗಳನ್ನು ನಿರ್ಮಿಸಲು ಸ್ಥಾಯಿ ಸಮಿತಿ ಸಭೆಯಲ್ಲಿ ಸಂಸದ ಬಿ.ವೈ.ಆರ್ ಚರ್ಚೆ

Pinterest LinkedIn Tumblr

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರವು ಪಶ್ಚಿಮ ಘಟ್ಟಗಳ ಪರ್ವತ ಶ್ರೇಣಿ ಮತ್ತು ಮಲೆನಾಡು ಪ್ರದೇಶವನ್ನು ಒಳಗೊಂಡಿರುವ ವಿಶಿಷ್ಟವಾದ ಭೂಸ್ವರೂಪವನ್ನು ಹೊಂದಿರುವ ಶಿವಮೊಗ್ಗ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಲೆನಾಡು ಪ್ರದೇಶಗಳಲ್ಲಿ ಅಂದಾಜು 4954 ಕುಗ್ರಾಮಗಳಿದ್ದು, ಮಾನವ ವಾಸವು ಚದುರಿದ ಮತ್ತು ಗುಡ್ಡಗಾಡು ಪರ್ವತಗಳಲ್ಲಿ ವಾಸಿಸುವ ಹಾಗೂ ಮಳೆಗಾಲದಲ್ಲಿ ತುಂಬಿ ಹರಿಯುವ ಸಣ್ಣ ತೊರೆಗಳನ್ನು ಶಾಲಾ ಮಕ್ಕಳು ಸ್ಥಳೀಯ ಕಾಲು ಸೇತುವೆಗಳ ಮೇಲೆ ದಾಟುವುದು ಕಷ್ಟಕರ ಮತ್ತು ಸವಾಲಿನದ್ದಾಗಿದೆ.

ಅಸಮರ್ಪಕ ರಸ್ತೆ ಸಂಪರ್ಕದಿಂದ ಜನ ಮತ್ತು ಜಾನುವಾರುಗಳು ಪ್ರಾಣ ಕಳೆದುಕೊಂಡ ನಿದರ್ಶನಗಳಿವೆ. ಅಲ್ಲದೇ ಜನರು ತಮ್ಮ ಸ್ಥಳಗಳಿಗೆ ತಲುಪಲು ದೂರದ ಪ್ರಯಾಣವನ್ನು ತಡೆಯಲು ಒಟ್ಟು 634 ಕಾಲು ಸಂಕಗಳನ್ನು ನಿರ್ಮಾಣ ಮಾಡುವ ಬಗ್ಗೆ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸದಸ್ಯ ಬಿ. ವೈ. ರಾಘವೇಂದ್ರ ಅವರು ಜೂ.23ರಂದು ಗ್ರಾಮೀಣಾಭಿವೃದ್ಧಿ & ಪಂಚಾಯತ್‌ ರಾಜ್ ಸ್ಥಾಯಿ ಸಮಿತಿ ಸಭೆಯಲ್ಲಿ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಜಾದವ್, ಸಮಿತಿ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಿದರು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಕಾಂಪೌಂಡ್ ನಿರ್ಮಾಣದ ಬಗ್ಗೆಯೂ ಸಹ ಚರ್ಚಿಸಲಾಗಿ ಸಕಾರಾತ್ಮಕವಾಗಿ ಸ್ಪಂದಿಸಿರುವುದಕ್ಕೆ ಸಂಸದರು ಅಭಿನಂದನೆಯನ್ನು ತಿಳಿಸಿದ್ದಾರೆ.

 

Comments are closed.