ಪ್ರಮುಖ ವರದಿಗಳು

ಟೈಲರ್ ತಲೆಕಡಿದ ದುಷ್ಕರ್ಮಿಗಳು: ಉದಯಪುರದಲ್ಲಿ ಉದ್ವಿಗ್ನ ಪರಿಸ್ಥಿತಿ, ಕರ್ಫ್ಯೂ ಜಾರಿ, ರಾಜಸ್ಥಾನದಾದ್ಯಂತ 1 ತಿಂಗಳು ನಿಷೇಧಾಜ್ಞೆ

Pinterest LinkedIn Tumblr

ನವದೆಹಲಿ: ಪ್ರವಾದಿ ಪೈಗಂಬರ್ ಕುರಿತು ವಿವಾದದ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿದ್ದ ನೂಪುರ್ ಶರ್ಮಾಗೆ ಬೆಂಬಲ ನೀಡಿರುವುದಕ್ಕೆ ಹಾಡಹಗಲೇ ವ್ಯಕ್ತಿಯೊಬ್ಬನ ಶಿರಚ್ಛೇದನ ಮಾಡಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕಳವಳಕಾರಿ ಘಟನೆ ರಾಜಸ್ಥಾನದ ಉದಯ್ ಪುರದಲ್ಲಿ ನಡೆದಿದೆ.

ಉದಯ್ ಪುರದ ಜನನಿಭಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇದೊಂದು ಪಾಠ ಎಂಬುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶಿರಚ್ಛೇದನದ ವಿಡಿಯೋ ಪೋಸ್ಟ್ ಮಾಡಿ ಎಚ್ಚರಿಕೆಯ ಸಂದೇಶ ರವಾನಿಸಿರುವುದಾಗಿ ವರದಿ ತಿಳಿಸಿದೆ. ಉದಯಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಉದಯುಪರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ರಾಜಸ್ಥಾನದಾದ್ಯಂತ 1 ತಿಂಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪೊಲೀಸರ ಪ್ರಾಥಮಿಕ ವರದಿ ಪ್ರಕಾರ, ಶಿರಚ್ಛೇದನಕ್ಕೊಳಗಾದ ವ್ಯಕ್ತಿ ವೃತ್ತಿಯಲ್ಲಿ ಟೈಲರ್ ಆಗಿದ್ದು, ಹರಿತವಾದ ಆಯುಧದಿಂದ ಟೈಲರ್ ತಲೆ ಕಡಿಯಲಾಗಿದೆ. ಇದೊಂದು ತಾಲಿಬಾನ್ ಮಾದರಿಯ ಕೊಲೆಯಾಗಿದೆ ಎಂದು ವರದಿ ಹೇಳಿದೆ.

ಈ ಘಟನೆಯ ನಂತರ ರಾಜಸ್ಥಾನದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದ್ದು, ಜನರು ಶಾಂತಿಯನ್ನು ಕಾಪಾಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮನವಿ ಮಾಡಿಕೊಂಡಿದ್ದಾರೆ. ಇದೊಂದು ಪೈಶಾಚಿಕ ಕೃತ್ಯವಾಗಿದ್ದು, ಯಾರೇ ಇದರಲ್ಲಿ ಶಾಮೀಲಾಗಿದ್ದರೂ ಅವರಿಗೆ ತಕ್ಕ ಶಾಸ್ತಿ ಮಾಡುವುದಾಗಿ ಗೆಹ್ಲೋಟ್ ತಿಳಿಸಿದ್ದಾರೆ.

Comments are closed.