ಪ್ರಮುಖ ವರದಿಗಳು

ನಟಿ ಸ್ವರಾ ಭಾಸ್ಕರ್‌ಗೆ ಕೊಲೆ ಬೆದರಿಕೆ: ತನಿಖೆ ಆರಂಭಿಸಿದ ಮುಂಬೈ ಪೊಲೀಸರು

Pinterest LinkedIn Tumblr

ಮುಂಬೈ: ನಟಿ ಸ್ವರಾ ಭಾಸ್ಕರ್‌ ಅವರಿಗೆ ಜೀವ ಬೆದರಿಕೆ ಪತ್ರ ಬಂದಿದ್ದು ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

ವರ್ಸೊವಾದಲ್ಲಿರುವ ನಟಿಯ ನಿವಾಸಕ್ಕೆ ಪತ್ರವನ್ನು ಕಳುಹಿಸಲಾಗಿದೆ ಎನ್ನಲಾಗಿದೆ.

ಎರಡು ದಿನಗಳ ಹಿಂದೆ ಸ್ವರಾ ಭಾಸ್ಕರ್ ಅವರು ವರ್ಸೊವಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

‘ವೀರ ಸಾವರ್ಕರ್ ಅವರಿಗೆ ಅವಮಾನ ಮಾಡುವುದನ್ನು ದೇಶದ ಯುವಕರು ಸಹಿಸುವುದಿಲ್ಲ’ ಎಂದು ಹಿಂದಿಯಲ್ಲಿ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

Comments are closed.