ಕರಾವಳಿ

ಕರಾವಳಿ ಜಿಲ್ಲೆಗಳಲ್ಲಿ ಬಿಡದೇ ಸುರಿಯುತ್ತಿರುವ‌ ಮಳೆ; ಜನಜೀವನ ಅಸ್ತವ್ಯಸ್ತ

Pinterest LinkedIn Tumblr

ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಬುಧವಾರ ಮಧ್ಯಾಹ್ನದಿಂದ ಆರಂಭಗೊಂಡ ಮಳೆ ಗುರುವಾರವೂ ಬಿಡದೆ ಸುರಿಯುತ್ತಿದೆ. ಮಂಗಳೂರು ಕೊಟ್ಟಾರಚೌಕಿ ಬಳಿ‌ಕೃತಕ ನೆರೆ ಸೃಷ್ಟಿಯಾಗಿದೆ.

ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ವಿಶೇಷ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಶಾಲೆಗಳು ಕಾರ್ಯ ನಿರ್ವಹಿಸಬೇಕು, ಮಕ್ಕಳು ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ನೀಡಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಸೂಚಿಸಿದ್ದಾರೆ.

ತಾಲೂಕುಗಳಲ್ಲಿ ಆಯಾ ಶಿಕ್ಷಣಾಧಿಕಾರಿಗಳು ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಮಾಡಬೇಕು ಎಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Comments are closed.