ಕರಾವಳಿ

ಕಳವು ಮಾಡಿದ ದನಗಳ ಮಾಂಸ ಮಾರಾಟ ದಂಧೆ; ಬಂಟ್ವಾಳದಲ್ಲಿ ಆರೋಪಿಗಳಾದ ಅಪ್ಪ-ಮಗನ ಬಂಧನ

Pinterest LinkedIn Tumblr

ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಸ್‌ಐ.ಅವಿನಾಶ್ ನೇತೃತ್ವದ ತಂಡ ದಾಳಿ ನಡೆಸಿ ಅಪ್ಪ ಮಗ ಇಬ್ಬರು ಆರೋಪಿಗಳನ್ನು ಬಂಧಿಸಿ, ಸ್ಥಳದಲ್ಲಿದ್ದ ಸಾವಿರಾರು ರೂ. ಮೌಲ್ಯದ ಗೋ ಮಾಂಸವನ್ನು ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.

ಗೋಳ್ತಮಜಲು ನಿವಾಸಿಗಳಾದ ಮಹಮ್ಮದ್ ಮತ್ತು ಸಾಧಿಕ್ ಬಂಧಿತ ಆರೋಪಿಗಳು.ಗೋಳ್ತಮಜಲು ಮಹಮ್ಮದ್ ಎಂಬವರ ಮನೆಯಲ್ಲಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.

ಈ ಹಿನ್ನೆಲೆಯಲ್ಲಿ ಪಿಎಸ್ಐ ಅವಿನಾಶ್ ನೇತೃತ್ವದ ನಗರ ಠಾಣಾ ಪೋಲೀಸರ ತಂಡ ಮುಂಜಾವಿನ ವೇಳೆ ದಾಳಿ ನಡೆಸಿ, ಮಾಂಸ ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.

Comments are closed.