ಕರ್ನಾಟಕ

ಪಿಎಸ್ಐ ನೇಮಕಾತಿ ಅಕ್ರಮ: ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಎಡಿಜಿಪಿ ದರ್ಜೆ ಅಧಿಕಾರಿ ಅಮೃತ್ ಪೌಲ್ ಬಂಧನ!

Pinterest LinkedIn Tumblr

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ನಾಲ್ಕು ಬಾರಿ ವಿಚಾರಣೆ ಎದುರಿಸಿದ್ದ ಅಮೃತ್ ಪೌಲ್ ರನ್ನು ಇಂದು ಸಿಐಡಿ ಅಧಿಕೃತವಾಗಿ ಬಂಧಿಸಿದೆ. ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಎಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರು ಬಂಧನಕ್ಕೆ ಒಳಗಾಗಿದ್ದಾರೆ.

ಅಮೃತ್ ಪೌಲ್ 25 ಪಿಎಸ್ಐ ಅಭ್ಯರ್ಥಿಗಳ ಜೊತೆ 30 ಲಕ್ಷ ರೂಪಾಯಿ ಡೀಲ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸಲು ಅವರನ್ನು ಸಿಐಡಿ ಬಂಧಿಸಿದೆ‌ ಎನ್ನಲಾಗಿದೆ.

545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಅಮೃತ್ ಪೌಲ್ ಅವರಿಗೆ ಹಲವು ದೂರುಗಳು ಬಂದಿದ್ದು ಇದನ್ನು ನಿರ್ಲಕ್ಷಿಸಿದ್ದರು ಎಂಬ ಆರೋಪ ಕೂಡ ಅವರ ವಿರುದ್ಧ ಕೇಳಿಬಂದಿತ್ತು. ಅಕ್ರಮ ಬಯಲಿಗೆ ಬರುತ್ತಿದ್ದಂತೆ ಅಮೃತ್ ಪೌಲ್ ಅವರ ವರ್ಗಾವಣೆಗೆ ಒತ್ತಡ ಹೆಚ್ಚಾಗಿದ್ದರಿಂದ ಈ ಹಿಂದೆ ಅವರನ್ನು ವರ್ಗಾಯಿಸಲಾಗಿತ್ತು.

545 ಪಿಎಸ್‌ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‌ಪಿ ಹಾಗೂ ಎಫ್‌ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದರು ಎಂಬ ಗಂಭೀರ ಆರೋಪವಿದೆ.

Comments are closed.