ಕರ್ನಾಟಕ

‘ಕಾನೂನಿನ ಮುಂದೆ ಎಲ್ಲರೂ ಒಂದೇ’-ಅಮೃತ್ ಪೌಲ್ ಬಂಧನದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಡಿ. ರೂಪಾ ಟ್ವೀಟ್

Pinterest LinkedIn Tumblr

ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಎಡಿಜಿಪಿ ದರ್ಜೆಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್​ ಬಂಧಿಸಿದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಡಿ. ರೂಪಾ ‘ಕಾನೂನಿನ ಮುಂದೆ ಎಲ್ಲರೂ ಒಂದೇ’ ಎಂದು ಟ್ವೀಟ್ ಮಾಡಿದ್ದಾರೆ.

 

”ಐಪಿಎಸ್ ಅಧಿಕಾರಿಗಳ ಮೇಲೆ ಯಾವುದೇ ಶಿಸ್ತುಕ್ರಮ ಆಗುವುದಿಲ್ಲ ಎಂದು ಬಹಳಷ್ಟು ಜನ ನನಗೆ ಹೇಳ್ತಾ ಇದ್ದದ್ದು ಸುಳ್ಳು ಎಂಬುದು ಇಂದಿನ ಬಂಧನ ತೋರಿಸಿಕೊಟ್ಟಿದೆ. ಮೊದಲ ಬಾರಿಗೆ ರಾಜ್ಯದಲ್ಲಿ ನಡೆದ ಎಡಿಜಿಪಿ ಹುದ್ದೆಯ ಐಪಿಎಸ್ ಅಧಿಕಾರಿ ಬಂಧನವೇ ಇದಕ್ಕೆ ಸಾಕ್ಷಿ. ಕಾನೂನಿನ ಮುಂದೆ ಎಲ್ಲರೂ ಒಂದೇ. ಅಖಿಲ ಭಾರತ ಸಿವಿಲ್ ಸೇವಾ ನಿಯಮದಡಿ ಬಂಧನ ಆದರೆ ಸಸ್ಪೆಂಡ್ ಕೂಡ ಮಾಡಲೇಬೇಕಾಗುತ್ತದೆ” ಎಂದು ಬರೆದುಕೊಂಡಿದ್ದಾರೆ.

”ಪಿಎಸ್ಐ ನೇಮಕಾತಿ ಮರುಪರೀಕ್ಷೆ ನಿರ್ಧಾರದ ಮೂಲಕ ನೊಂದ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರವು ನ್ಯಾಯ ಒದಗಿಸಿದೆ. ನೇಮಕಾತಿ ಉಸ್ತುವಾರಿ ಹೊತ್ತಿರುವ ಹಿರಿಯ ಅಧಿಕಾರಿಗಳಿಂದ ಹಿಡಿದು suspension ಮುಂತಾದ ಶಿಸ್ತು ಕ್ರಮ(ಟ್ರಾನ್ಸ್‌ಫರ್ ಶಿಸ್ತುಕ್ರಮ ಅಲ್ಲ) ಆದಾಗ ಮಾತ್ರ ಮುಂದೆ ಇಂತಹ ಘಟನೆ ತಡೆಯಲು ಸಾಧ್ಯ. ಇಲ್ಲವಾದಲ್ಲಿ ಅಧಿಕಾರಿಗಳು ಆಡಿದ್ದೇ ಆಟ” ಎಂದು ಟ್ವೀಟ್ ಮಾಡಿದ್ದಾರೆ.

Comments are closed.