ಕರ್ನಾಟಕ

Breaking News: ಸರಳ ವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್‌ ಗುರೂಜಿ ಬರ್ಬರ ಕೊಲೆ

Pinterest LinkedIn Tumblr

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್‌ ಗುರೂಜಿಯವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭಕ್ತರ ಸೋಗಿನಲ್ಲಿ ಬಂದ ದುಷ್ಕರಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸರಳ ವಾಸ್ತು ಸಲಹೆ ನೀಡುತ್ತಿದ್ದ ಚಂದ್ರಶೇಖರ್‌ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿ‌ ಖಾಸಗಿ ಟಿವಿ ವಾಹಿನಿಗಳಲ್ಲಿ ಕಾರ್ಯಕ್ರಮ ನಡೆಸಿ ಖ್ಯಾತಿಯಾಗಿದ್ದರು. ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಕಾಸ್ಮಿಕ್ ಆರ್ಕಿಟೆಕ್ಚರ್ ನಲ್ಲಿ ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದರು.

ಘಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್‌ ಲಾಬೂರಾಮ್‌ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಗೆ ಯಾವ ಕಾರಣಕ್ಕಾಗಿ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹೋಟೆಲ್‌ ನಲ್ಲಿ ರಿಸಪ್ಶನ್‌ನಲ್ಲಿಯೇ ಚಾಕು ಇರಿದು ಹಂತಕರು ಪರಾರಿಯಾಗಿದ್ದಾರೆ.

ಸರಳ ಜೀವನ, ಸರಳ ವಾಸ್ತು, ಮನೆಗಾಗಿ ವಾಸ್ತು, ವಾಸ್ತು ಪರಿಹಾರದ ಮೂಲಕ ಅವರು ಮನೆಮಾತಾಗಿದ್ದರು. ಈವರೆಗೂ 2 ಸಾವಿರಕ್ಕೂ ಅಧಿಕ ಸೆಮಿನಾರ್‌ಗಳಲ್ಲಿ ಮಾತನಾಡಿರುವ ಚಂದ್ರಶೇಖರ್‌‌ ಗುರೂಜಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ 16 ಪ್ರಶಸ್ತಿಗಳನ್ನು ಪಡೆದಿದ್ದಾರೆ.

 

Comments are closed.