ಕರ್ನಾಟಕ

ರಾಜ್ಯದ 48 ಲಕ್ಷ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆಗೆ 132 ಕೋಟಿ ಮಂಜೂರು: ಸಿಎಂ ಬೊಮ್ಮಾಯಿ

Pinterest LinkedIn Tumblr

ಬೆಂಗಳೂರು: ತರಗತಿಗಳು ಆರಂಭವಾಗಿ ಆರೇಳು ವಾರಗಳು ಕಳೆದಿದ್ದರೂ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಗಳನ್ನು ವಿತರಿಸದೆ ರಾಜ್ಯ ಸರ್ಕಾರ ಠೀಕೆಗೆ ಗುರಿಯಾದ ಬೆನ್ನಲ್ಲೇ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ತಕ್ಷಣವೇ ಪೂರೈಸುವುದಾಗಿ ಶುಕ್ರವಾರ ಪ್ರಕಟಿಸಿದೆ.

ಮಕ್ಕಳಿಗೆ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸಲು ರೂ. 132 ಕೋಟಿ ಮಂಜೂರು ಮಾಡಲಾಗಿದೆ. ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 48 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಹಣ ಮಂಜೂರು ಮಾಡಿದೆ. ಆದರೆ ಅವು ಸಿದ್ಧವಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ, ಅವುಗಳನ್ನು ನಂತರ ವಿತರಿಸಲಾಗುವುದು ಯಾವುದೇ ಗೊಂದಲದ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯತೆ ಪೂರೈಸುವಲ್ಲಿ ಕ್ರಮ ಕೈಗೊಂಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಎರಡು ದಿನಗಳ ನಂತರ ಈ ಆದೇಶ ಬಂದಿದೆ. ಈ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

 

Comments are closed.