ಕರಾವಳಿ

ಉಡುಪಿ, ದ.ಕ ಜಿಲ್ಲೆಯಲ್ಲಿ ಜುಲೈ 11 ರಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

Pinterest LinkedIn Tumblr

ಮಂಗಳೂರು/ಉಡುಪಿ: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ರೆಡ್‌ ಅಲರ್ಟ್‌ ಮುಂದುವರಿಕೆ ಮಾಡಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ ಜು.11 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಎರಡೂ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ.

(File Photo)

ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರವೇ ರಜೆಯನ್ನು ಘೋಷಣೆ ಮಾಡಲಾಗಿದ್ದು, ಪಿಯುಸಿ, ಪದವಿ ಹಾಗೂ ಇತರ ವೃತ್ತಿಪರ ಸಂಸ್ಥೆಗಳಿಗೆ ಈ ರಜೆ ಅನ್ವಯ ಆಗುವುದಿಲ್ಲ ಎಂದು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿಯೂ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆಯನ್ನು ಮುಂದುವರಿಕೆ ಮಾಡಲಾಗಿದೆ. ಆದರೆ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

Comments are closed.