ಕರ್ನಾಟಕ

ರಾಜ್ಯದ ವಿವಿಧೆಡೆ ಮಳೆಯ ಅಬ್ಬರ: ಇಬ್ಬರು ಸಾವು

Pinterest LinkedIn Tumblr

ಮಂಗಳೂರು: ರಾಜ್ಯದ ವಿವಿಧೆಡೆ ಮಳೆಯ ಅಬ್ಬರ ಸೋಮವಾರವೂ ಮುಂದುವರೆದಿದೆ. ಶನಿವಾರ ಹಾಗೂ ಭಾನುವಾರ ಭೂಕುಸಿತ, ಜೀವ ಹಾನಿ ಬಗ್ಗೆ ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಎಂಬಲ್ಲಿ ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಾರು ಆಕಸ್ಮಿಕವಾಗಿ ಹೊಳೆಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಅವರನ್ನು ವಿಟ್ಲ ಸಮೀಪದ ಕುಂಡಡ್ಕ ನಿವಾಸಿ ಧನುಷ್ (26) ಮತ್ತು ಮಂಜೇಶ್ವರ ನಿವಾಸಿ ಧನುಷ್ (21) ಎಂದು ಗುರುತಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಡಗಿನ ಗಡಿಭಾಗದ ಅರಂತೋಡು ಗ್ರಾಮ ಪಂಚಾಯತ್‌ನ ಆಗ್ನೇಯಕ್ಕೆ 1.1 ಕಿ.ಮೀ ದೂರದಲ್ಲಿ ಭೂಕಂಪನವಾಗಿದ್ದು, ಯಾವುದೇ ಹಾನಿ ಸಂಭವಿಸಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಹೆಬ್ರಿ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಆಗುಂಬೆ ಘಾಟ್‌ನ ನಾಲ್ಕನೇ ಮತ್ತು 10ನೇ ತಿರುವಿನಲ್ಲಿ ಭೂಕುಸಿತ ಉಂಟಾಗಿದ್ದು, ಎನ್‌ಎಚ್ 169ರಲ್ಲಿ ಸಂಚಾರ ಸ್ಥಗಿತಗೊಂಡಿದೆ.

ದಕ್ಷಿಣ ಕನ್ನಡದಲ್ಲಿ ಕಾಳಿ ನದಿಯು ಅಣೆಕಟ್ಟಿನ ಮೇಲೆ ಹರಿಯುತ್ತಿದ್ದು, ಕದ್ರಾ ಪಟ್ಟಣಕ್ಕೆ ಸಂಪರ್ಕವನ್ನು ಕಡಿತಗೊಳಿಸಿದೆ. ನದಿ ಅಪಾಯದ ಮಟ್ಟ ಮೀರಿದ್ದು, ಹಲವು ಗ್ರಾಮಗಳ ಜನರಲ್ಲಿ ಎಚ್ಚರಿಕೆ ವಹಿಸಲಾಗಿದೆ.

Comments are closed.