ಕರಾವಳಿ

75ನೇ ಸ್ವಾತಂತ್ರ್ಯ ದಿನಾಚರಣೆ: ಸನ್ನಡತೆ ಆಧಾರದಲ್ಲಿ 84 ಕೈದಿಗಳ ಬಿಡುಗಡೆಗೆ ನಿರ್ಧಾರ

Pinterest LinkedIn Tumblr

ಬೆಂಗಳೂರು: “ಆಜಾದಿ ಕಾ ಅಮೃತ್‌ ಮಹೋತ್ಸವ’ ಅಂಗವಾಗಿ ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 84 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಅದೇ ರೀತಿ ಈ ವರ್ಷ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರು, ಬಳ್ಳಾರಿ, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ಮೈಸೂರು, ಕಲಬುರಗಿ ಸೇರಿ ವಿವಿಧ ಕಾರಾಗೃಹಗಳಲ್ಲಿರುವ 80 ಮಂದಿ ಪುರುಷರು ಮತ್ತು 4 ಮಂದಿ ಮಹಿಳೆಯರನ್ನು ಹೆಸರನ್ನು ಉಲ್ಲೇಖಿಸಿ ಕಾರಾಗೃಹ ಇಲಾಖೆ ರಾಜ್ಯ ಸರಕಾರಕ್ಕೆ ಪಟ್ಟಿ ಸಿದ್ಧಪಡಿಸಿ ಕಳುಹಿಸಿದೆ ಎನ್ನಲಾಗಿದೆ.

Comments are closed.