ಉಡುಪಿ: ಮಣಿಪಾಲದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಾಡ್ಜ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೆಸ್ಟೋರೆಂಟ್ ಸುಟ್ಟು ಕರಕಲಾದ ಘಟನೆ ಜು.15ರ ಮುಂಜಾನೆ ಸಂಭವಿಸಿದೆ.

ಇಲ್ಲಿನ ಖಾಸಗಿ ಲಾಡ್ಜ್‌ನ ರೆಸ್ಟೋರೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಮಿಲಿ ರೆಸ್ಟೋರೆಂಟ್ ವ್ಯಾಪಿಸಿದೆ.
ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂ.ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.
Comments are closed.