ಕರಾವಳಿ

ಕಾರಿನಲ್ಲಿ ವ್ಯಕ್ತಿಯನ್ನು‌ ಸುಟ್ಟು ಕೊಂದ ಪ್ರಕರಣ; ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಐಜಿಪಿ ಶ್ಲಾಘನೆ, 50 ಸಾವಿರ ಬಹುಮಾನ

Pinterest LinkedIn Tumblr

(ವರದಿ- ಯೋಗೀಶ್ ಕುಂಭಾಸಿ)
ಕುಂದಾಪುರ: ಕಾರ್ಕಳ ಮೂಲದ ವ್ಯಕ್ತಿಯೊಬ್ಬರನ್ನು ಕಾರಿನ ಸಹಿತ ಸಜೀವವಾಗಿ ಸುಟ್ಟು ಕೊಲೆಗೈದ ಪ್ರಕರಣವನ್ನು ಒಂದೇ ದಿನದಲ್ಲಿ ಭೇಧಿಸಿದ ಬೈಂದೂರು ಪೊಲೀಸರ ತಂಡಕ್ಕೆ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ಅವರು ಶ್ಲಾಘಿಸಿದ್ದು 50‌ ಸಾವಿರ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಗೆ ಶುಕ್ರವಾರ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದುಕೊಂಡರು. ಪ್ರಕರಣವನ್ನು ಕ್ಷಿಪ್ರವಾಗಿ ಭೇಧಿಸಿದ ಬೈಂದೂರು ಪೊಲೀಸರ ತಂಡಕ್ಕೆ ರೂ.50,000 ಬಹುಮಾನವನ್ನು ಘೋಷಿಸಿದ್ದಾರೆ.

(ಐಜಿಪಿ ದೇವಜ್ಯೋತಿ ರೇ ಅವರು ಬೈಂದೂರು ಪೊಲೀಸ್ ಠಾಣೆಗೆ ಭೇಟಿ ನೀಡಿದರು)

(ಮಾಧ್ಯಮಗಳನ್ನುದ್ದೇಶಿಸಿ ಎಸ್ಪಿ ವಿಷ್ಣುವರ್ಧನ್ ಮಾತನಾಡಿದರು)

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ವೇಳೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಪಿ ಅವರು, ಚಿನ್ನಾಭರಣ ಕಳವು ಪ್ರಕರಣ ಹಾಗೂ ಕಾರಿನೊಂದಿಗೆ ವ್ಯಕ್ತಿಯೊನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಡವನ್ನು ರಚಿಸಿ ಕ್ಷಿಪ್ರವಾಗಿ ಪ್ರಕರಣ ಭೇದಿಸಲಾಗಿದೆ. ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣದ ಸಮಗ್ರ ತನಿಖೆ ಮುಂದುವರಿದಿದ್ದು, ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಬೈಂದೂರು‌ ಪಿಎಸ್ಐ ಪವನ್ ನಾಯಕ್, ಗಂಗೊಳ್ಳಿ ಪಿಎಸ್ಐ ವಿನಯ್ ಎಂ. ಕೊರ್ಲಹಳ್ಳಿ ಈ ಸಂದರ್ಭ ಇದ್ದರು.

ಘಟನೆ ಹಿನ್ನೆಲೆ:
60 ವರ್ಷ ಪ್ರಾಯದ ಕಾರ್ಕಳದ ಆನಂದ ದೇವಾಡಿಗ ಎನ್ನುವರನ್ನು ಪ್ರಜ್ಞೆ ತಪ್ಪಿಸಿ 52 ವರ್ಷದ ಸದಾನಂದ ಶೇರಿಗಾರ್ ಎಂಬಾತ ತನ್ನ‌ ಪ್ರೇಯಸಿ ಶಿಲ್ಪಾ ಎಂಬಾಕೆ ಜೊತೆ‌ಸೇರಿ ಕಾರಿನಲ್ಲಿ ಬೈಂದೂರಿಗೆ ಕರೆತಂದು ಜೀವಂತವಾಗಿ ಕಾರಿನೊಳಕ್ಕೆ ಸುಟ್ಟಿದ್ದರು. ಪ್ರಕರಣದಲ್ಲಿ ಸದಾನಂದ ಶೇರಿಗಾರ, ಶಿಲ್ಪಾ ಸಹಿತ ಇವರು ಪರಾರಿಯಾಗಲು ಸಹಕರಿದ ಸತೀಶ್ ದೇವಾಡಿಗ ಮತ್ತು ನಿತಿನ್ ಎನ್ನುವರನ್ನು ಕೃತ್ಯ ನಡೆದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದರು.

Comments are closed.