ಕರ್ನಾಟಕ

ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೊಗೆ ನಿರ್ಬಂಧ: ಆದೇಶ ಹೊರಡಿಸಿದ ದಿನವೇ ಹಿಂಪಡೆದ ಸರ್ಕಾರ..!

Pinterest LinkedIn Tumblr

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು, ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ತೆಗೆಯುವುದು, ವಿಡಿಯೊ ಮಾಡುವುದಕ್ಕೆ ನಿರ್ಬಂಧ ಹೇರಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಶುಕ್ರವಾರ ರಾತ್ರಿ ಹಿಂಪಡೆದಿದೆ.

ಸಾರ್ವಜನಿಕರು ಸರ್ಕಾರಿ ಕಚೇರಿಯ ಸಮಯದಲ್ಲಿ ಬಂದು ಫೋಟೋ, ವಿಡಿಯೊ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾರೆ. ಇದು ದುರ್ಬಳಕೆಯಾಗುವ ಸಾಧ್ಯತೆಯಿದೆ. ಇದರಿಂದ ಸರ್ಕಾರಕ್ಕೆ ಮತ್ತು ಸರ್ಕಾರದ ಇಲಾಖೆಗಳ ಘನತೆಗೆ ಕುಂದುಂಟಾಗುತ್ತದೆ. ವಿಶೇಷವಾಗಿ ಮಹಿಳಾ ನೌಕರರಿಗೆ ತೊಂದರೆಯುಂಟಾಗುತ್ತದೆ. ಹೀಗಾಗಿ ಸರ್ಕಾರಿ ಕಚೇರಿಯ ಸಮಯದಲ್ಲಿ ಸಾರ್ವಜನಿಕರು ಅನಧಿಕೃತವಾಗಿ ನಿಷೇಧಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು.

ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೊ ಮಾಡುವುದನ್ನು ನಿಷೇಧಿಸಿ ಸರ್ಕಾರ ಜುಲೈ 15ರಂದು ಆದೇಶ ಹೊರಡಿಸಿದ್ದು ವ್ಯಾಪಾಕ ಠೀಕೆಗಳು ಬಂದಿದ್ದವು. ಈ ನಡುವೆ ಕೆಲವೇ ಗಂಟೆಗಳಲ್ಲಿ ಮತ್ತೆ ಆದೇಶವನ್ನು ಹಿಂಪಡೆದಿದೆ.

Comments are closed.