ಕರಾವಳಿ

ದಿಯಾ ಖ್ಯಾತಿಯ ಪೃಥ್ವಿ ಅಂಬಾರ್‌ಗೆ ಮಾತೃ ವಿಯೋಗ

Pinterest LinkedIn Tumblr

ಮಂಗಳೂರು: ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಹೃದಯ ಸಂಬಂಧಿ ಕಾಯಿಲೆಯಿಂದ ಶುಕ್ರವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಜುಲೈ 15 ರಂದು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಶನಿವಾರ ಅವರ ಅಂತ್ಯಕ್ರಿಯೆ ಕಾಸರಗೋಡಿನ ಉಪ್ಪಳ ಸಮೀಪದ ಐಲದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಇವರ ಪುತ್ರ ನಟ ಪೃಥ್ವಿ ಅಂಬರ್‌ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದರು. ಇವರು ಅಭಿನಯಿಸಿದ ದಿಯಾ ಸಿನಿಮಾ ಸಾಕಷ್ಟು ಹೆಸರು ಮಾಡಿತ್ತು. ಇತ್ತೀಚೆಗೆ ಬಿಡುಗಡೆಯಾದ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್‌ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಪೃಥ್ವಿ ಅಂಬಾರ್ ಧಾರಾವಾಹಿ ಮೂಲಕ ಬಣ್ಣದ ಬದುಕು ಆರಂಭಿಸಿದವರು. 2008ರಲ್ಲಿ ಪ್ರಸಾರವಾದ ‘ರಾಧಾ ಕಲ್ಯಾಣ’ ಧಾರಾವಾಹಿಯಿಂದ ಹಿಡಿದು ಈಗ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಸೇರಿ ಅನೇಕ ಧಾರಾವಾಹಿಯಲ್ಲಿ ಅವರು ನಟಿಸಿದ್ದಾರೆ.

Comments are closed.