ಉಡುಪಿ: ಕಳೆದ ಕೆಲ ವರ್ಷಗಳಿಂದ ಕಾರ್ಕಳ ತಾಲೂಕು ಕಚೇರಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸುಶ್ಮಿತಾ (25) ಮೃತ ಸಿಬ್ಬಂದಿ. ಇವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರ್ಕಳದ ಹುಡ್ಕೋ ಕಾಲನಿ ನಿವಾಸಿಯಾಗಿರುವ ಸುಶ್ಮಿತ, ತಂದೆ – ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.