ಬೆಳ್ಳಾರೆ : ಸುಳ್ಯ ತಾಲೂಕಿನ ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ಮಾಲಕನ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತ ಘಟನೆ ಜು.26 ರಂದು ಸಂಭವಿಸಿದೆ.

ಬೆಳ್ಳಾರೆ ಸಮೀಪದ ನೆಟ್ಟಾರು ನಿವಾಸಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ (29) ಮೃತಪಟ್ಟ ಯುವಕ.

ಪೆರುವಾಜೆ ಕ್ರಾಸ್ ಬಳಿ ಪ್ರವೀಣ್ ಅವರು ಕೋಳಿ ಅಂಗಡಿ ಹೊಂದಿದ್ದು ರಾತ್ರಿ ಅಂಗಡಿ ಮುಚ್ಚುತ್ತಿರುವ ವೇಳೆ ಒಂದು ಬೈಕಿನಲ್ಲಿ ಮೂವರು ಅವರ ಮೇಲೆ ಮಾರಾಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ್ದು ಪ್ರವೀಣ್ ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಮಾರಾಕಾಯುದದಿಂದ ಮನಸೋಇಚ್ಚೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ವಾರದ ಹಿಂದೆ ಬೆಳ್ಳಾರೆ ಸಮೀಪದ ಕಳಂಜದಲ್ಲಿ ಮಸೂದ್ ಎಂಬ ಯುವಕನ ಬರ್ಬರ ಕೊಲೆಯಾಗಿತ್ತು. ಇದೀಗಾ ಪ್ರವೀಣ್ ಕೊಲೆಯಾಗಿದ್ದು ಪೊಲೀಸರು ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ.
Comments are closed.