ಮಂಗಳೂರು: ಬಾಲಕಿಯ ಮೇಲೆ ತಂದೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ವಿಟ್ಲ ಪೆರುವಾಯಿಯ 70 ವರ್ಷದ ವ್ಯಕ್ತಿ ಶಿಕ್ಷೆಗೊಳಗಾದವನು. 2020 ಮಾರ್ಚ್ ತಿಂಗಳಿನಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಧೀಶರಾದ ಕೆ.ಎಂ. ರಾಧಾಕೃಷ್ಣ ಅವರು ತೀರ್ಪು ನೀಡಿದ್ದಾರೆ.
ಈ ಪ್ರಕರಣದಲ್ಲಿ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ಸರಕಾರದ ಪರ ವಾದಿಸಿದ್ದರು.
Comments are closed.