ಬೆಂಗಳೂರು: ಸುಳ್ಯದಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದ ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ‘ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ’ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.
ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ pic.twitter.com/kCk3W6hVc5— Basavaraj S Bommai (@BSBommai) July 26, 2022
ಘಟನೆ ವಿವರ..
ಬೆಳ್ಳಾರೆಯ ಹಿಂದುತ್ವಪರ ಸಂಘಟನೆಗಳ ಮುಖಂಡ, ಬಿಜೆಪಿ ಜಿಲ್ಲಾ ಯುವಮೋರ್ಚಾದ ಸದಸ್ಯ ಪ್ರವೀಣ್ ನೆಟ್ಟಾರು(32) ಅವರನ್ನು ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಬೆಳ್ಳಾರೆಯಲ್ಲಿ ತಲವಾರಿನಿಂದ ಕಡಿದು ಬರ್ಬರವಾಗಿ ಕೊಲೆಗೈದಿದ್ದರು.
Comments are closed.