ಕರ್ನಾಟಕ

ಶಿವಮೊಗ್ಗ ನಗರದಲ್ಲಿ 50 ಚೆಕ್ ಪೋಸ್ಟ್; 1 ತಲ್ವಾರ್, 4 ಹರಿತವಾದ ಡ್ಯಾಗರ್‌ ವಶಕ್ಕೆ ಪಡೆದ ಪೊಲೀಸರು..!

Pinterest LinkedIn Tumblr

ಶಿವಮೊಗ್ಗ: ಶಿವಮೊಗ್ಗದಲ್ಲಿ ಭದ್ರತೆ ಮತ್ತು ತಪಾಸಣೆ ಹೆಚ್ಚಿಸಿದ್ದು ಚೆಕ್ ಪೋಸ್ಟ್ ರಚಿಸಿ ಬೈಕ್‌ಗಳು, ಕಾರುಗಳು ಸೇರಿದಂತೆ ಎಲ್ಲ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ಬುಧವಾರ ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಶಿವಮೊಗ್ಗ ನಗರದಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪದವಾಗಿ ಓಡಾಡುವ ವಾಹನ ಮತ್ತು ವ್ಯಕ್ತಿಗಳ ತಪಾಸಣೆ (30 ವರ್ಷದೊಳಗಿನ ವಯಸ್ಕರ ಮೇಲೆ) ನಡೆಸಲಾಗಿದೆ.

ಅಪರಾಧ ಹಿನ್ನೆಲೆ ಉಳ್ಳವರ (ಆರ್.ಎಸ್) ಮನೆಗಳ ತಪಾಸಣೆ ನಡೆಸಿ ಹಾಗೂ ನಗರದ ವೈನ್ ಶಾಪ್ ಸುತ್ತ ಹಾಗೂ ನಿರ್ಜನ ಪ್ರದೇಶಗಳಲ್ಲಿ ಕುಡಿದು ಜನರಿಗೆ ತೊಂದರೆ ಕೊಡುವವರ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.

11 ಅಬಕಾರಿ ಪ್ರಕರಣಗಳು, 350 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು, 93 ಲಘು ಪ್ರಕರಣಗಳು, 96 ತಂಬಾಕು ಪ್ರಕರಣಗಳು , 10 ಗಾಂಜಾ ಸೇವನೆ ಮಾಡಿದ ಜನರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ.

1 ತಲ್ವಾರ್, 4 ಹರಿತವಾದ ಡ್ಯಾಗರ್‌ಗಳನ್ನೂ ವಶಕ್ಕೆ ಪಡೆದು ಕಾನೂನು ರೀತಿ ಕ್ರಮ ಕೈಗೊಂಡಿರುತ್ತದೆ. ಈ ಕಾರ್ಯಾಚರಣೆಯು ನಿರಂತರವಾಗಿ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಒಂದು ಗಂಟೆಗಳ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Comments are closed.