ಕರಾವಳಿ

ಭಾರೀ ಮಳೆ; ಆ.2 (ಇಂದು) ಕುಂದಾಪುರ, ಬೈಂದೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Pinterest LinkedIn Tumblr

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬೈಂದೂರು ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನಲೆಯಲ್ಲಿ ಎರಡೂ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ ಆಗಸ್ಟ್ 2 ರಂದು ರಜೆ ಘೋಷಣೆ ಮಾಡಿ ಕುಂದಾಪುರ ಸಹಾಯಕ ಕಮೀಷನರ್ ರಾಜು ಕೆ. ಆದೇಶ ಹೊರಡಿಸಿದ್ದಾರೆ.

ಸೋಮವಾರ ಮಧ್ಯಾಹ್ನದಿಂದ ಎರಡೂ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಗ್ಗು ಪ್ರದೇಶಗಳು ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

 

Comments are closed.