ಕರಾವಳಿ

ಮಂಗಳೂರು ಕೊಣಾಜೆ ಠಾಣೆಯಲ್ಲಿ ಕರ್ತವ್ಯನಿರತ ಪೊಲೀಸ್ ಹೃದಯಾಘಾತದಿಂದ ಮೃತ್ಯು

Pinterest LinkedIn Tumblr

ಮಂಗಳೂರು: ಕೋಣಾಜೆ ಠಾಣೆಯಲ್ಲಿ ಕರ್ತವ್ಯನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ.

ಜಗನ್ನಾಥ ಪಿ. (44) ಮೃತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್.

ಜಗನ್ನಾಥ ಅವರು ಕರ್ತವ್ಯದಲ್ಲಿ ವೇಳೆ ಅಸ್ವಸ್ಥಗೊಂಡಿದ್ದು, ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕೆತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ‌ ಎನ್ನಲಾಗಿದೆ.

ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

 

Comments are closed.