ಕರ್ನಾಟಕ

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನ

Pinterest LinkedIn Tumblr

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ(45) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಸೋಮವಾರ ಬೆಳಿಗ್ಗೆ ಜಿಮ್ ಗೆ ಹೋಗಿದ್ದ ವೇಳೆ ಕುಸಿದು ಬಿದ್ದಿದ್ದು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಕೂಡ ಅವರು ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ವಿವಿಧ ಪತ್ರಿಕೆ ಟಿವಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದ ಗುರುಲಿಂಗ ಸ್ವಾಮಿ ಅವರು ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು.

Comments are closed.