ಕರಾವಳಿ

ಮಂಗಳೂರಿನಲ್ಲಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದ ಸಿಎಂ ಬೊಮ್ಮಾಯಿ

Pinterest LinkedIn Tumblr

ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂ.ಆರ್.ಪಿ.ಎಲ್ ಒಳಗೊಂಡಂತೆ 3,800 ಕೋ.ರೂ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲು ಕೊಚ್ಚಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಿಳಿದಿದ್ದಾರೆ.

ಕೇರಳದಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದ್ದಾರೆ. ಈ ಸಂದರ್ಭ ರಾಜ್ಯಪಾಲರು ಕೂಡ ಇದ್ದರು.

ಮೋದಿ ಅವರು ವಿಮಾನ ನಿಲ್ದಾಣದಿಂದ ಸೇನಾ ಹೆಲಿಕಾಪ್ಟರ್ ನಲ್ಲಿ ಕೂಳೂರು ಹೆಲಿಪ್ಯಾಡ್ಗೆ ಆಗಮಿಸಿ ಸಮಾರಂಭಕ್ಕೆ ಆಗಮಿಸಿದ್ದಾರೆ.

 

Comments are closed.