ಉಡುಪಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಮಾನ್ಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಲಯವು ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30,000 ದಂಡ ವಿಧಿಸಿದೆ.
ಅರ್ಫನ್ (27) ಶಿಕ್ಷೆಗೊಳಗಾದ ಗಾಂಜಾ ಪ್ರಕರಣದ ಆರೋಪಿ.

ಆರೋಪಿ ಅರ್ಫನ್ ವಿರುದ್ದ ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ 5 ಸೆಪ್ಟಂಬರ್ 2020 ರಂದು ಗಾಂಜಾ ಪ್ರಕರಣ ದಾಖಲಾಗಿದ್ದು, ಆತನಿಂದ 1 ಕೆಜಿ 048 ಗ್ರಾಂ ತೂಕದ ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು, ಈ ಪ್ರಕರಣದಲ್ಲಿ ಅಂದಿನ ಸೆನ್ ಅಪರಾಧ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ರವರು ಪಿರ್ಯಾದಿದಾರರಾಗಿದ್ದು, ಪಿಎಸ್ಐ ಲಕ್ಷ್ಮಣ ಅವರು ಈ ಪ್ರಕರಣದಲ್ಲಿ ದೋಷಾರೋಪಣಾ ಪತ್ರವನ್ನು ತಯಾರಿಸಿರುತ್ತಾರೆ.

ಆರೋಪಿ ಅರ್ಫನ್’ಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30,000 ರೂ. ದಂಡ ವಿಧಿಸಿದ್ದು, ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಸರಳ ಕಾರಾಗೃಹ ವಾಸ ವಿಧಿಸಿ, ಉಡುಪಿಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಧೀಶರಾದ ಶಾಂತವೀರ ಶಿವಪ್ಪರವರು ತೀರ್ಪು ನೀಡಿದ್ದಾರೆ.
ಪ್ರಾಸಿಕ್ಯೂಶನ್ ಪರವಾಗಿ ಶಾಂತಿಬಾಯಿ ವಾದ ಮಂಡನೆಯನ್ನು ಮಾಡಿದ್ದು, ಸದ್ರಿ ಗಾಂಜಾ ಪ್ರಕರಣದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರು ಇಲಾಖೆಯ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Comments are closed.