ಮಂಗಳೂರು: ಪೊಲೀಸ್ ಇಲಾಖೆಯಲ್ಲಿ ಕಳೆದ 11 ವರ್ಷದಿಂದ ಕರ್ತವ್ಯದಲ್ಲಿದ್ದ ಗೀತಾ ಎಂಬ ಹೆಸರಿನ ಶ್ವಾನ ಶನಿವಾರ ಮೃತಪಟ್ಟಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಲ್ಯಾಬ್ರಡಾರ್ ರಿಟ್ರೀವರ್ ಎಂಬ ತಳಿಯ ಈ ಶ್ವಾನವು 2011 ರಲ್ಲಿ ಮೇ 21ರಂದು ಜನಿಸಿದ್ದು, ಅದೇ ವರ್ಷದ ಆಗಸ್ಟ್ 19ರಂದು ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿತ್ತು.
ಇನ್ನು ಮಂಗಳೂರಿಗೆ ಅತೀ ಗಣ್ಯರು ಭೇಟಿಯ ಸಂದರ್ಭ ಮತ್ತು ಇತರ ಬಂದೋಬಸ್ತ್ ವೇಳೆ ಸ್ಫೋಟಕ ಪತ್ತೆ ಹಚ್ಚುವ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದು, ಇಂದು ಸಾವಿಗೀಡಾಗಿದೆ.
Comments are closed.