ಕರಾವಳಿ

ಅಕ್ರಮ ಮರಳುಗಾರಿಕೆ ದಕ್ಕೆಗೆ ದಾಳಿ; 2 ಲಾರಿ ಸಹಿತ 3 ಮೆಟ್ರಿಕ್ ಟನ್ ಮರಳು ವಶಕ್ಕೆ

Pinterest LinkedIn Tumblr

ಉಡುಪಿ: ಉಡುಪಿ ತಾಲೂಕು ಪೆರಂಪಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ರಾತ್ರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಗೌತಮ್ ಶಾಸ್ತ್ರಿ ಹೆಚ್ ಅವರು ದಾಳಿ ನಡೆಸಿ 2 ಲಾರಿ ಸಮೇತ 3 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆದಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ, ಉಡುಪಿ ತಾಲೂಕು ಪೆರಂಪಳ್ಳಿ ಪರಿಸರದಲ್ಲಿ ದಲ್ಲಿ (ಸ್ವರ್ಣ ನದಿ) ಅನಧಿಕೃತವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಸಾರ್ವಜನಿಕರ ಮಾಹಿತಿ ಮೇರೆಗೆ ಭೂ ವಿಜ್ಞಾನಿ ಗೌತಮ್ ಶಾಸ್ತ್ರಿ ಅವರು ರಾತ್ರಿ ಸಮಯ 10.00 ಕ್ಕೆ ದಾಳಿ ನಡೆಸಿ ಎರಡು ಲಾರಿ ಮತ್ತು 3 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆಯಲ್ಲಿ ಚಾಲಕ ಯೋಗೇಶ್ವರ್ ಶೆಟ್ಟಿಗಾರ್ ಸಹಕರಿಸಿದ್ದರು. ಭೂವಿಜ್ಞಾನಿ ಯವರು ಪ್ರಕರಣದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವ ವರೆಗೆ ಖನಿಜ ಸಹಿತ ವಶಪಡಿಸಿಕೊಂಡಿರುವ ವಾಹನಗಳನ್ನು ಮಣಿಪಾಲ ಪೊಲೀಸ್ ಠಾಣೆ ಸುಪರ್ದಿಗೆ ನೀಡಿದ್ದಾರೆ.

Comments are closed.