ಕರಾವಳಿ

ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವಘಡ: ಸಮುದ್ರದ ಅಲೆಗೆ ಕೊಚ್ಚಿಹೋಗಿ ಮೀನುಗಾರ ಮೃತ್ಯು

Pinterest LinkedIn Tumblr

ಕುಂದಾಪುರ: ಸಮುದ್ರದಲ್ಲಿ ಮರಣ ಬಲೆಯಿಂದ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರ ಕಡಲಿನ ಅಲೆಯಿಂದ ಕೊಚ್ಚಿ ಹೋದ ಘಟನೆ ಗುರುವಾರ ಸಂಜೆ ನಡೆದಿದ್ದು ಶುಕ್ರವಾರ ಮೃತದೇಹ ಪತ್ತೆಯಾಗಿದೆ.

ಗಂಗೊಳ್ಳಿಯ ಮಲ್ಯರಬೆಟ್ಟು ನಿವಾಸಿ ವೆಂಕಟೇಶ್ ಖಾರ್ವಿ (47) ಮೃತ ದುರ್ದೈವಿ. ಗಂಗೊಳ್ಳಿ ಬ್ರೇಕ್ ವಾಟರ್ ಬಳಿ ಬೇಲಿಕೆರಿ ಬಂದರು ಸಮೀಪ ಈ ದುರ್ಘಟನೆ ನಡೆದಿತ್ತು.

ವೆಂಕಟೇಶ್ ಮೀನುಗಾರಿಕೆ ನಡೆಸುತ್ತಿದ್ದು ಗುರುವಾರ ಮರ ಬಲೆ ಹಾಕಿ ಮೀನು ಹಿಡಿಯಲು ತೆರಳಿದ್ದರು. ಈ ವೇಳೆ‌ ಅಲೆಯ ಅಬ್ಬರಕ್ಕೆ ಸಿಕ್ಕು ಸಮುದ್ರ ಪಾಲಾಗಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಮೃತದೇಹ ಬೆಲಿಕೇರಿ ಬಳಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಗಂಗೊಳ್ಳಿ ಆಪತ್ಬಾಂಧವ 24*7 ಆಂಬುಲೆನ್ಸ್ ಮೂಲಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಯಿತು.

ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

 

 

Comments are closed.