ಬಳ್ಳಾರಿ: ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಅಂಗವಾಗಿ ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿದರು.

ರಾಜ್ಯವು ಬಹಳ ಸಂದಿಗ್ಧ ಪರಿಸ್ಥಿತಿಯಲ್ಲಿರುವಾಗ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ನನ್ನ ಮುಂದೆ ಅನೇಕ ಸವಾಲುಗಳಿವೆ. ಇದೊಂದು ರೀತಿಯ ಯುದ್ಧದ ಸನ್ನಿವೇಶ.ಮೇಕೆದಾಟು ಪಾದಯಾತ್ರೆ, ಸ್ವಾತಂತ್ರ್ಯ ನಡಿಗೆಯಲ್ಲಿ ಕನ್ನಡಿಗರು ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದಂತೆ ಭಾರತ ಐಕ್ಯತಾ ಯಾತ್ರೆಗೂ ಸಹ ಸಹಕಾರ ನೀಡಿದ್ದಾರೆ. ಅದಕ್ಕಾಗಿ ಅವರಿಗೆ ಅನಂತ ಕೋಟಿ ನಮನಗಳು. ಅನಾರೋಗ್ಯದ ನಡುವೆಯೂ ಪಾದಯಾತ್ರೆಯಲ್ಲಿ ಪಾಲ್ಗೊಂಡ ಸೋನಿಯಾ ಗಾಂಧಿ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದರು.
ಈ ಪಾದಯಾತ್ರೆ ಕನ್ನಡ ನಾಡಿನ ಜನರ ಭದ್ರ ಭವಿಷ್ಯ ರೂಪಿಸಲು, ಕನ್ನಡ ನಾಡಿನ ಹಿರಿಮೆಯನ್ನು ಕಾಪಾಡಲು ಎಂಬುದನ್ನು ಯಾರೂ ಮರೆಯಬಾರದು. 40% ಭ್ರಷ್ಟ ಸರ್ಕಾರ ಕರ್ನಾಟಕವನ್ನು ಭ್ರಷ್ಟಾಚಾರದ ಕ್ಯಾಪಿಟಲ್ ಮಾಡಿದೆ. ರಾಜ್ಯದ ವೈಭವವನ್ನು ಮರಳಿ ತರಲು ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ಮಾಡಿಕೊಡಬೇಕೆಂದು ವಿನಂತಿಸಿದರು.
Comments are closed.