ಕರ್ನಾಟಕ

ಎಐಸಿಸಿ ಅಧ್ಯಕ್ಷರಾಗಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ: ಅಧಿಕೃತ ಘೋಷಣೆ

Pinterest LinkedIn Tumblr

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕ ಮೂಲಕ, ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರ ಪರವಾಗಿ 7 ಸಾವಿರದ 897 ಮತಗಳು, ಸಂಸದ ಶಶಿ ತರೂರ್ ಪರವಾಗಿ ಸಾವಿರ ಮತಗಳು ಲಭಿಸಿವೆ. ಇನ್ನು 416 ಮತಗಳು ತಿರಸ್ಕೃತಗೊಂಡಿವೆ. ಈ ಮೂಲಕ 24 ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ಪರಾಜಿತ ಅಭ್ಯರ್ಥಿ ಶಶಿ ತರೂರ್ ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ಪುನರುಜ್ಜೀವನ ಆರಂಭವಾಗಿದೆ ಎಂದು ನಾನು ನಂಬುತ್ತೇನೆ ಎಂದು ಹೇಳಿಕೆಯಲ್ಲಿ ಶಶಿ ತರೂರ್ ಹೇಳಿದ್ದಾರೆ. ಮೊನ್ನೆ ಮತದಾನದ ದಿನವೂ ಶಶಿ ತರೂರ್ ಈ ಮಾತುಗಳನ್ನು ಹೇಳಿದ್ದರು.

 

Comments are closed.